ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ ಮುಖ್ಯ ಶಿಕ್ಷಕ ಸೇವೆಯಿಂದ ವಜಾ…

86
firstsuddi

ಮೈಸೂರು : ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿದ ಮುಖ್ಯ ಶಿಕ್ಷಕನನ್ನು ಇದೀಗ ಸೇವೆಯಿಂದ ವಜಾ ಮಾಡಲಾಗಿದೆ.

ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಖಾಸಗಿ ಶಾಲೆಯ ಮುಖ್ಯ ಶಿಕ್ಷಕರಾದ ಆರ್ ಎಂ ಅನಿಲ್​ಕುಮಾರ್ ಎಂಬುವವರು ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದನ್ನು ಕೆಲ ವಿದ್ಯಾರ್ಥಿಗಳು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿತ್ತು.

ಬಳಿಕ ಆರೋಪಿ ಶಿಕ್ಷಕನ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಸಾರ್ವಜನಿಕರು ಶಿಕ್ಷಕನ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದರು. ಹೀಗಾಗಿ ಶಾಲೆಯ ಆಡಳಿತ ಮಂಡಳಿ ತುರ್ತು ಸಭೆಯನ್ನು ನಡೆಸಿ ಮುಖ್ಯಶಿಕ್ಷಕ ಆರ್ ಎಂ ಅನಿಲ್​ಕುಮಾರ್​ನನ್ನು ಸೇವೆಯಿಂದ ವಜಾಗೊಳಿಸಿದೆ.