ಬಾಲಕಿಗೆ ಲವ್ ಲೆಟರ್ ಕೊಟ್ಟ 6ನೇ ತರಗತಿ ವಿದ್ಯಾರ್ಥಿ- ಬಾಸುಂಡೆ ಬರುವ ರೀತಿ ಹೊಡೆದ ಶಿಕ್ಷಕಿ!

103
firstsuddi

ಕಾರವಾರ : 6ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ವಿದ್ಯಾರ್ಥಿನಿಗೆ ಲವ್ ಲೆಟರ್ ಕೊಟ್ಟು ಶಾಲೆಯ ಶಿಕ್ಷಕಿಯಿಂದ ಬಾಸುಂಡೆ ಬರುವಂತೆ ಹೊಡೆತ ತಿಂದಿರುವ ಘಟನೆ ಹೊನ್ನಾವರ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಆರನೇ ತರಗತಿ ವಿದ್ಯಾರ್ಥಿ ತನ್ನ ಸಹಪಾಠಿ ವಿದ್ಯಾರ್ಥಿನಿಗೆ ಸಿನಿಮಾ ಸ್ಟೈಲ್ ನಲ್ಲಿ ಲವ್ ಲೆಟರ್ ಕೊಟ್ಟು ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ ವಿದ್ಯಾರ್ಥಿನಿ ಈ ಲೆಟರ್ ನ್ನು ಶಾಲೆಯ ಶಿಕ್ಷಕಿ ಕಲ್ಪನ ಹೆಗಡೆಯವರಿಗೆ ನೀಡಿದ್ದಾಳೆ. ಲವ್ ಲೆಟರ್ ನೋಡಿ ಕೋಪಗೊಂಡ ಶಿಕ್ಷಕಿ ವಿದ್ಯಾರ್ಥಿಯನ್ನು ಕರೆಯಿಸಿ ಬಾಸುಂಡೆ ಬರುವಂತೆ ಹೊಡೆದಿದ್ದಾರೆ.

ಇನ್ನು ವಿಷಯ ಪೋಷಕರಿಗೆ ತಿಳಿಯುತ್ತಿದ್ದಂತೆ ಶಿಕ್ಷಕಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊನೆಗೆ ಶಿಕ್ಷಕಿ ಪೋಷಕರಲ್ಲಿ ಕ್ಷಮೆ ಕೇಳುವ ಮೂಲಕ ಪ್ರಕರಣ ಇತ್ಯರ್ಥವಾಗಿದೆ.