ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಿಸುವ ಮೂಲಕ ಮಹಮ್ಮದ್ ಹ್ಯಾರಿಸ್ ನಲಪಾಡ್ ಹುಟ್ಟುಹಬ್ಬ ಆಚರಣೆ…

103
firstsuddi

ಚಿಕ್ಕಮಗಳೂರು : ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್‍ಗಳನ್ನು ವಿತರಿಸುವ ಮೂಲಕ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಯುವ ಕಾಂಗ್ರೆಸ್ ನೂತನ ರಾಜ್ಯಾಧ್ಯಕ್ಷ ಮಹಮ್ಮದ್ ಹ್ಯಾರಿಸ್ ನಲಪಾಡ್ ಅವರ ಹುಟ್ಟುಹಬ್ಬವನ್ನು ನಿನ್ನೆ ಸಂಭ್ರಮದಿಂದ ಆಚರಿಸಿದರು.

ತಾಲ್ಲೂಕಿನ ಹಾಲೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳಿಗ್ಗೆ ತೆರಳಿದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ವಿದ್ಯಾರ್ಥಿಗಳಿಂದ ಕೇಕ್ ಕತ್ತರಿಸುವ ಮೂಲಕ ತಮ್ಮ ನಾಯಕನ ಹುಟ್ಟುಹಬ್ಬವನ್ನು ಆಚರಿಸಿದರು.

ನಂತರ 40 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗುಗಳನ್ನು ಹಾಗೂ ಸಾರ್ವಜನಿಕರಿಗೆ ಸಿಹಿಯನ್ನು ವಿತರಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಹಿಲ್ ಷರೀಫ್ ಯುವ ನಾಯಕ ಮಹಮ್ಮದ್ ಹ್ಯಾರಿಸ್ ನಲಪಾಡ್ ಅವರು ರಾಜ್ಯ ಕಾಂಗ್ರೆಸ್‍ನ ಬಹುದೊಡ್ಡ ಆಸ್ತಿಯಾಗಿದ್ದಾರೆ ಎಂದರು.

ಸರಳತೆ, ಸೌಜನ್ಯತೆ ಹೊಂದಿದ್ದು, ಸದಾ ಕ್ರಿಯಾಶೀಲರಾಗಿರುವ ನಲಪಾಡ್ ಅವರು ರಾಜ್ಯ ಯುವ ಕಾಂಗ್ರೇಸ್ ಅಧ್ಯಕ್ಷರಾಗಿ ನೇಮಕವಾಗಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹೆಚ್ಚಿನ ಉತ್ಸಾಹ ತಂದಿದೆ ಎಂದು ಹೇಳಿದರು.

ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಎನ್.ಎಸ್.ಚೇತನ, ಅಲ್ಪಸಂಖ್ಯಾತ ವಿಭಾಗದ ಪ್ರಧಾನ ಕಾರ್ಯದರ್ಶಿ ರಫೀಕ್ ಅಹಮದ್, ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಆದಿತ್ಯಗೌಡ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುಬಾನ್, ಸಿದ್ದೇಶ್, ರಾಜಶೇಖರ್, ಮಂಜುನಾಥ್, ಸುಮಂತ್, ಲಾಕೇಶ್ ಹಾಜರಿದ್ದರು.