ಕೇಂದ್ರ ಬಜೆಟ್ 2022: ಆರ್ ಬಿಐನಿಂದ ಡಿಜಿಟಲ್ ರೂಪಾಯಿ ಜಾರಿಗೆ, 400 ವಂದೇ ಭಾರತ್ ರೈಲು ತಯಾರಿ ಗುರಿ…

121
firstsuddi

ನವದೆಹಲಿ : ಬ್ಲಾಕ್ ಚೈನ್ ಮತ್ತು ಇತರ ತಂತ್ರಜ್ಞಾನಗಳನ್ನು ಬಳಸಿಕೊಂಡು ಆರ್ ಬಿಐ 2022-23ನೇ ಹಣಕಾಸು ವರ್ಷದಲ್ಲಿ ಡಿಜಿಟಲ್ ರೂಪಾಯಿಯನ್ನು ನೀಡಲಿದೆ. ಇದರಿಂದ ಆರ್ಥಿಕತೆಗೆ ದೊಡ್ಡ ಉತ್ತೇಜನ ಸಿಗಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದರ ಜೊತೆಗೆ ಕ್ರಿಪ್ಟೋ ಮೇಲಿನ ಆದಾಯಕ್ಕೆ 30% ತೆರಿಗೆ ವಿಧಿಸಿದ್ದಾರೆ. ಇದರಿಂದಾಗಿ ಕ್ರಿಪ್ಟೋಗೆ ಭಾರತದಲ್ಲಿ ಕಾನೂನು ಮಾನ್ಯತೆ ಸಿಕ್ಕಿದೆ.

ಮುಂದಿನ ಮೂರು ವರ್ಷಗಳಲ್ಲಿ ಹೊಸ ತಲೆಮಾರಿನ 400 ವಂದೇ ಭಾರತ್ ರೈಲುಗಳನ್ನು ತರಲಾಗುವುದು. ಪಬ್ಲಿಕ್-ಪ್ರೈವೇಟ್ (ಪಿಪಿಪಿ) ಸಹಭಾಗಿತ್ವದಲ್ಲಿ ರೈಲ್ವೇ ವಿಭಾಗದಲ್ಲಿ ನಾಲ್ಕು ಕಡೆ ಲಾಜಿಸ್ಟಿಕ್ ಪಾರ್ಕ್ ನಿರ್ಮಾಣದ ಗುರಿ ಹೊಂದಲಾಗಿದ್ದು, ಈ ಯೋಜನೆಯಿಂದ ಸ್ಥಳೀಯ ಬಿಸಿನೆಸ್ ಬೆಳವಣಿಗೆಗೆ ಒತ್ತುಕೊಡಲಾಗಿದೆ. 2 ಸಾವಿರ ಕಿ.ಮಿ ರೈಲ್ವೇ ಕವಚ ಯೋಜನೆಯಡಿ ರೈಲು ಮಾರ್ಗಗಳ ವಿಸ್ತರಣೆಗೆ ಯೋಜನೆ ರೂಪಿಸಲಾಗಿದೆ ಎಂದರು.

2022-23ನೇ ಸಾಲಿನ ಬಜೆಟ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 25 ಸಾವಿರ ಕಿ.ಮೀ ವಿಸ್ತರಣೆ ಜೊತೆಗೆ ಲಾಜಿಸ್ಟಿಕ್ ಪಾರ್ಕ್ ನಿರ್ಮಾಣಕ್ಕಾಗಿ 20 ಸಾವಿರ ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ತಿಳಿಸಿದರು.