ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧ ಸಾವು…

50
firstsuddi

ವಿಜಯಪುರ : ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಿಎಸ್ಎಫ್ ಯೋಧ ಮೃತಪಟ್ಟಿದ್ದಾರೆ.

ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಬಸವರಾಜ ಸಿದ್ದಪ್ಪ ಡೊಂಗರಗಾವಿ (28) ಮೃತಪಟ್ಟ ಯೋಧ. 8 ವರ್ಷಗಳ ಹಿಂದೆ ಸೇನೆಗೆ ಸೇರಿದ್ದ ಬಸವರಾಜ್, ಪ್ರಸ್ತುತ ಬಿಹಾರದಲ್ಲಿ ಕರ್ತವ್ಯದಲ್ಲಿದ್ದರು. ಇತ್ತೀಚೆಗಷ್ಟೇ ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಾಗ ಆಲಮಟ್ಟಿ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ 2-3 ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ನಿಧನರಾಗಿದ್ದಾರೆ.