ಗೇಟ್ ಪರೀಕ್ಷೆ ಮುಂದೂಡಲು ನಿರಾಕರಿಸಿದ ಸುಪ್ರೀಂ ಕೋರ್ಟ್.

97
firstsuddi

ನವದೆಹಲಿ : ಇಂಜಿನಿಯರಿಂಗ್ ಗ್ರಾಜ್ಯುಯೇಟ್ ಆಪ್ಟಿಟ್ಯೂಡ್ ಟೆಸ್ಟ್(GATE)ಪರೀಕ್ಷೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್, ಸೂರ್ಯ ಕಾಂತ್ ಮತ್ತು ವಿಕ್ರಮ್ ನಾಥ್ ಅವರನ್ನೊಳಗೊಂಡ ನ್ಯಾಯಪೀಠ, ಕೋವಿಡ್ 3ನೇ ಅಲೆಯಿಂದಾಗಿ ಪರೀಕ್ಷೆಯನ್ನು ಮುಂದೂಡಿದರೆ ವಿದ್ಯಾರ್ಥಿಗಳಲ್ಲಿ ಅವ್ಯವಸ್ಥೆ ಹಾಗೂ ಅನಿಶ್ಚಿತತೆ ಸೃಷ್ಟಿಸುತ್ತದೆ. ಫೆಬ್ರವರಿ 5ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿದ್ದು, ಅದರಂತೆ ಪರೀಕ್ಷೆ ನಡೆಸಬೇಕು. ಈ ವಿಷಯದಲ್ಲಿ ನ್ಯಾಯಾಲಯ ಮಧ್ಯೆ ಪ್ರವೇಶಿಸುವುದಿಲ್ಲ ಎಂದು ಹೇಳಿದೆ.

ಈ ಬಾರಿಯ ಗೇಟ್ ಪರೀಕ್ಷೆಯಲ್ಲಿ 9 ಲಕ್ಷ ವಿದ್ಯಾರ್ಥಿಗಳು ಹಾಜರಾಗಲಿದ್ದು, ಸುಮಾರು 20 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡುವಂತೆ ಆನ್ ಲೈನ್ ನಲ್ಲಿ ಸಹಿ ಹಾಕಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಗ್ರಾಜ್ಯುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಇಂಜಿನಿಯರಿಂಗ್ (ಗೇಟ್) ಎಂಬುದು ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ. ಈ ಪರೀಕ್ಷೆ ಇಂಜಿನಿಯರಿಂಗ್ ಅಭ್ಯರ್ಥಿಗಳಿಗೆ ಉದ್ಯೋಗ ಪಡೆಯಲು, ಜೊತೆಗೆ ಉನ್ನತ ಶಿಕ್ಷಣಕ್ಕೆ ವೇದಿಕೆಯಾಗಿದೆ.