ನಾಳೆಯಿಂದ ಥಿಯೇಟರ್‌ಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ…

73
firstsuddi

ಬೆಂಗಳೂರು : ನಾಳೆಯಿಂದ ಸಿನಿಮಾ ಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಸರ್ಕಾರ ಅವಕಾಶ ನೀಡಿದೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು, ಸಿಎಂ ನೇತೃತ್ವದಲ್ಲಿ ಇವತ್ತು ಸಭೆ ನಡೆಸಿ ಚರ್ಚಿಸಲಾಗಿದೆ. ನಾಳೆಯಿಂದ ಚಿತ್ರಮಂದಿರ, ಯೋಗ ಸೆಂಟರ್, ಸ್ವಿಮ್ಮಿಂಗ್, ಜಿಮ್ ಸೆಂಟರ್ ಗಳಿಗೆ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಈ ಎಲ್ಲಾ ಸ್ಥಳಕ್ಕೆ ಎರಡು ಡೋಸ್ ಲಸಿಕೆ ಕಡ್ಡಾಯವಾಗಿದೆ. ತಿಂಡಿ ಪದಾರ್ಥಗಳನ್ನ ಥಿಯೇಟರ್ ಒಳಗೆ ತೆಗೆದುಕೊಂಡು ಹೋಗಲು ನಿಷೇಧ ಹೇರಲಾಗಿದೆ. ವಿರಾಮದ ಸಂದರ್ಭದಲ್ಲಿ ಹೊರಗೆ ಬಂದು ತಿನ್ನಬಹುದು. ಅಗತ್ಯ ಕೋವಿಡ್ ಮುನ್ನೆಚ್ಚರಿಕಾ ಕ್ರಮವನ್ನ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.

ಡಿಸೆಂಬರ್ ಕೊನೆಯ ವಾರದಲ್ಲಿ ಒಮಿಕ್ರಾನ್ ಸೋಂಕು ಹೆಚ್ಚಾದ ಮೇಲೆ ಕೆಲವು ಕ್ರಮಗಳನ್ನ ತೆಗೆದುಕೊಳ್ಳಲಾಗಿತ್ತು. ಜನವರಿ ತಿಂಗಳಲ್ಲಿ ಶೇ.5-6ರಷ್ಟು ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದರು. ಫೆಬ್ರವರಿಯಲ್ಲಿ ಶೇ.2ರಷ್ಟು ದಾಖಲಾಗಿದ್ದಾರೆ. ಹೀಗಾಗಿ, ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.