ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,27,952 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,20,80,664ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,059 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,01,114ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,20,80,664 ಮಂದಿ ಸೋಂಕಿತರ ಪೈಕಿ ಈವರೆಗೆ 4,02,47,902 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










