ವಿಚ್ಛೇದನ ಹೆಚ್ಚಳಕ್ಕೆ ಟ್ರಾಫಿಕ್ ಸಮಸ್ಯೆಯೂ ಕಾರಣ : ಅಮೃತಾ ಫಡ್ನವೀಸ್.

66
firstsuddi

ಮುಂಬೈ : ಮುಂಬೈನಲ್ಲಿ ಟ್ರಾಫಿಕ್ ಸಮಸ್ಯೆ ಸಾಮಾನ್ಯವಾಗಿಬಿಟ್ಟಿದೆ. ಇದರಿಂದಾಗಿ ಕುಟುಂಬಸ್ಥರು ಪರಸ್ಪರ ಸಮಯ ಕೊಡಲಾಗುತ್ತಿಲ್ಲ. ಹೀಗಾಗಿಯೇ ವಿಚ್ಛೇದನ ಪ್ರಕರಣಗಳು ಹೆಚ್ಚುತ್ತಿವೆ ಎಂದು ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಾಮಾನ್ಯ ನಾಗರಿಕಳಾಗಿ ಹೇಳುತ್ತಿದ್ದೇನೆ, ನಾನು ಒಮ್ಮೆ ಹೊರಗೆ ಹೋದಾಗ ಗುಂಡಿಗಳು, ಟ್ರಾಫಿಕ್ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತೇನೆ. ಟ್ರಾಫಿಕ್ ಕಾರಣ, ಜನರು ತಮ್ಮ ಕುಟುಂಬಗಳಿಗೆ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಪರಿಣಾಮ ವಿಚ್ಛೇದನ ಪ್ರಕರಣಗಳು ಹೆಚ್ಚುತ್ತಿವೆ. ಮುಂಬೈನಲ್ಲಿ ಶೇ.3ರಷ್ಟು ವಿಚ್ಛೇದನಗಳು ಟ್ರಾಫಿಕ್ ಸಮಸ್ಯೆಯಿಂದ ನಡೆಯುತ್ತಿವೆ ಎಂದಿದ್ದಾರೆ.