ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ – ಒಂದೇ ಕುಟುಂಬದ ಮೂವರು ದಾರುಣ ಸಾವು…

107
firstsuddi

ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ಉಡುಪಿ ಜಿಲ್ಲೆಯ ಕುಂದಾಪುರದ ನಿವಾಸಿಗಳಾದ ಗೀತಾ (32), ಗೀತಾ ತಾಯಿ ಶಾರದಾ (60) ಹಾಗೂ ಗೀತಾ ಮಗಳು ಧ್ರುತಿ (5) ಎಂದು ಗುರುತಿಸಲಾಗಿದೆ. ಇನ್ನೂ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಂದೇ ಕುಟುಂಬದ ಆರು ಜನರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನೆ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.