ಉಡುಪಿ : ರಾಜ್ಯದಲ್ಲಿ ಹಿಜಾಬ್-ಕೇಸರಿ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇಂದು ನಗರದ ಎಂಜಿಎಂ ಕಾಲೇಜಿನ ಹಿಂದೂ ವಿದ್ಯಾರ್ಥಿಗಳು ಕೇಸರಿ ಪೇಟ, ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಈ ವೇಳೆ ಆಡಳಿತ ಮಂಡಳಿ ಗೇಟ್ ಗೆ ಬೀಗ ಹಾಕಿದೆ. ಕೇಸರಿ ಪೇಟ ತೊಟ್ಟ ವಿದ್ಯಾರ್ಥಿಗಳು ಆವರಣದ ಹೊರಗಡೆ ಇದ್ದು, ಬೀಗ ತೆಗೆಯಲು ಕಾಯುತ್ತಿದ್ದಾರೆ.
ಇನ್ನೂ ರಾಜ್ಯಾದ್ಯಂತ ಹಿಜಬ್ ಧರಿಸುವ ಹಕ್ಕಿಗಾಗಿ ಹೋರಾಟ ನಡೆಯುತ್ತಿದೆ. ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ ಗೆ ನಿರ್ಬಂಧ ಹೇರಿದ್ದನ್ನ ವಿರೋಧಿಸಿ, ಕೆಲ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಪ್ರಕರಣದ ವಿಚಾರಣೆ ನಡೆಯಲಿದ್ದು,
ಹೈಕೋರ್ಟ್ ಯಾವ ಆದೇಶ ನೀಡಲಿದೆ ಎಂದು ಕಾದು ನೋಡಬೇಕಿದೆ.










