ಬೆಂಗಳೂರು : ರಾಜ್ಯಾದ್ಯಂತ ಹಿಜಾಬ್-ಕೇಸರಿ ವಿವಾದ ಭುಗಿಲೆದ್ದ ಹಿನ್ನಲೆ ಸರ್ಕಾರ ಶಾಲೆ-ಕಾಲೇಜುಗಳಿಗೆ ನಾಳೆಯಿಂದ 3 ದಿನ ರಜೆ ಘೋಷಿಸಿದೆ.
ರಾಜ್ಯದ ಎಲ್ಲಾ ಶಾಲೆ-ಕಾಲೇಜು, ಪದವಿ ಕಾಲೇಜು, ಇಂಜಿನಿಯರಿಂಗ್ ಕಾಲೇಜುಗಳಿಗೆ ನಾಳೆಯಿಂದ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ. ಆದರೆ 1 ರಿಂದ 7ನೇ ತರಗತಿವರೆಗೆ ಶಾಲೆ ಎಂದಿನಂತೆ ತರಗತಿ ನಡೆಯಲಿವೆ.
ಹಿಜಾಬ್ ವಿಚಾರದಲ್ಲಿ ಸರ್ಕಾರ ಈಗಾಗಲೇ ತನ್ನ ನಿರ್ಧಾರ ಹೇಳಿದೆ. ಆದರೂ ಕೆಲ ಕಡೆ ಸ್ಥಿತಿ ಗಂಭೀರವಾಗಿದೆ. ಇದರ ಬಗ್ಗೆ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳು ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ತಿಳಿಸಿದರು.










