ಮಹಿಳೆಯರ ಬಟ್ಟೆಯಿಂದ ಅತ್ಯಾಚಾರಕ್ಕೆ ಪ್ರಚೋದನೆ ನೀಡುತ್ತೆ : ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ…

54
firstsuddi

ನವದೆಹಲಿ : ವಿದ್ಯಾರ್ಥಿಗಳು ಮೈತುಂಬಾ ಬಟ್ಟೆ ಹಾಕಿಕೊಳ್ಳಬೇಕು. ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ. ಅತ್ಯಾಚಾರ ಹೆಚ್ಚಾಗಲು ಮಹಿಳೆಯರ ಧರಿಸಿನಿಂದ ಪುರುಷರು ಉದ್ವೇಗಕ್ಕೆ ಒಳಗಾಗುವುದೇ ಕಾರಣ. ಮಹಿಳೆಯರು ಬಟ್ಟೆಯಿಂದ ಅತ್ಯಾಚಾರಕ್ಕೆ ಪ್ರಚೋದನೆ ನೀಡುತ್ತದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಹಿಳೆಯರು ಬಿಕನಿ ಹಾಕವುದು ಅವರ ಮೂಲಭೂತ ಹಕ್ಕು ಎಂದು ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಕ್ಷಮೆ ಕೇಳಬೇಕು. ಅವರು ಕೀಳು ಮಟ್ಟದ ಹೇಳಿಕೆಯನ್ನು ನೀಡಿದ್ದಾರೆ. ಸಮವಸ್ತ್ರ ವಿಷಯದ ನಡುವೆ ಬಿಕಿನಿ ಪದ ಬಳಕೆ ತಪ್ಪು. ದೇಶದ ಧರ್ಮ, ಸಂಸ್ಕೃತಿ, ಪರಂಪರೆ ಅವರಿಗೆ ಗೊತ್ತಿಲ್ಲ. ಕೇಸರಿ ನಮ್ಮ ಪರಂಪರೆಯಾಗಿದೆ ಎಂದರು.

ಹಿಜಾಬ್ ಹಿಂದೆ ಎಸ್ ಡಿಪಿಐ ಮತ್ತು ಪಿಎಫ್ ಐ ಕೈವಾಡವಿದೆ. ಕಾಂಗ್ರೆಸ್ ಕೇವಲ ಓಟ್ ಬ್ಯಾಂಕ್ ರಾಜಕೀಯಕ್ಕಾಗಿ ಅಲ್ಪಸಂಖ್ಯಾತರನ್ನು ಬಳಕೆ ಮಾಡಿಕೊಳ್ಳಲಾಗಿದೆ. ಇದರ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಪ್ರತಿಯೊಬ್ಬರು ಭಾರತ ಮಾತೆಯ ಮಕ್ಕಳು, ಒಂದೇ ತಾಯಿಯ ಮಕ್ಕಳಾಗಿದ್ದಾರೆ. ಎಲ್ಲಾ ಅಲ್ಪ ಸಂಖ್ಯಾತರು ಕೆಟ್ಟವರಲ್ಲ. ಇಂತಹವರನ್ನು ಪಾಕಿಸ್ತಾನವು ಬೆಂಬಲಿಸಲ್ಲ. ರಾಜಕಾರಣದಲ್ಲಿ ನಾವು ಕೇಸರಿಕರಣ ಮಾಡುತ್ತೆವೆ. ಶಿಕ್ಷಣದಲ್ಲಿ ಕೇಸರಿಕರಣ ಮಾಡಲ್ಲ ಎಂದರು.

ಇನ್ನೂ ಮಹಿಳೆಯರ ಬಟ್ಟೆಯಿಂದ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ ಎಂಬ ಹೇಳಿಕೆ ವಿವಾದ ಆಗುತ್ತಿದ್ದಂತೆ ರೇಣುಕಾಚಾರ್ಯ ಅವರು ಕ್ಷಮೆ ಕೋರಿದರು. ನನ್ನ ಹೇಳಿಕೆಯನ್ನು ಅಪಾರ್ಥವಾಗಿ ತಿಳಿದುಕೊಳ್ಳಬೇಡಿ. ಪ್ರಿಯಾಂಕ ಗಾಂಧಿ ವಾದ್ರಾ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದೇನೆ. ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಹೇಳಿದರು.