ಬೆಳಗಾವಿ : ಜಿಲ್ಲೆಯ ರಾಮದುರ್ಗ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ನಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ಹಾಸ್ಟೆಲ್ ಇದಾಗಿದ್ದು, ಹದಿನಾಲ್ಕು ವಿದ್ಯಾರ್ಥಿನಿಯರು ಊಟ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದಾರೆ. ಈ ಪೈಕಿ 10 ವಿದ್ಯಾರ್ಥಿನಿಯರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ನಾಲ್ವರು ವಿದ್ಯಾರ್ಥಿನಿಯರನ್ನು ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.
ಹಾಸ್ಟೆಲ್ ನಲ್ಲಿ ಊಟ ಸರಿಯಾಗಿ ಕೊಡಲ್ಲ ಎಂದು ವಿದ್ಯಾರ್ಥಿನಿಯರು ಆರೋಪ ಮಾಡಿದ್ದಾರೆ.










