ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 67,084 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,24,78,060ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,241 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,06,520ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,24,78,060 ಮಂದಿ ಸೋಂಕಿತರ ಪೈಕಿ ಈವರೆಗೆ 4,11,80,751 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










