ನವದೆಹಲಿ : ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್, ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಿ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಸುಪ್ರೀಂ ಕೋರ್ಟ್, ಈ ಹಂತದಲ್ಲಿ ಏಕೆ ಮಧ್ಯಪ್ರವೇಶಿಸಬೇಕೆಂದು ಪ್ರಶ್ನಿಸಿ ಮನವಿಯನ್ನು ನಿರಾಕರಿಸಿದೆ.
ಹಿಜಾಬ್ ನಿರ್ಬಂಧಿಸಿರುವ ಶಿಕ್ಷಣ ಸಂಸ್ಥೆಗಳ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಗೆ ಹೈಕೋರ್ಟ್ ವಿಶೇಷ ಪೀಠ ರಚನೆ ಮಾಡಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ರಚಿಸಲಾಗಿದೆ.










