ಪುನೀತ್ ಅಭಿನಯದ ‘ಜೇಮ್ಸ್’ ಟೀಸರ್ ರಿಲೀಸ್…

103
firstsuddi

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಜೇಮ್ಸ್ ಟೀಸರ್ ರಿಲೀಸ್ ಆಗಿದ್ದು, ಹಾಲಿವುಡ್ ರೇಂಜ್ ನಲ್ಲಿ ಪವರ್ ಸ್ಟಾರ್ ಮೂಡಿ ಬಂದಿದ್ದಾರೆ. ಪುನೀತ್ ಅಭಿನಯದ ಕೊನೆಯ ಸಿನಿಮಾ ಇದಾಗಿದ್ದು, ಈ ಸಿನಿಮಾ ನೋಡಲು ಅಪ್ಪು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಜೇಮ್ಸ್ ಸಿನಿಮಾಕ್ಕೆ ನಿರ್ದೇಶಕ ಚೇತನ್ ಕುಮಾರ್ ಆ್ಯಕ್ಷನ್ ಕಟ್ ಹೇಳಿದ್ದು, ರಾಜಕುಮಾರ ಸಿನಿಮಾದಲ್ಲಿ ನಟಿಸಿದ್ದ ಪ್ರಿಯಾ ಆನಂದ್ ಅವರೇ ಜೇಮ್ಸ್ ಚಿತ್ರದಲ್ಲಿ ಅಪ್ಪುಗೆ ಜೋಡಿಯಾಗಿದ್ದಾರೆ. ಶರತ್ ಕುಮಾರ್, ರಂಗಾಯಣ ರಘು, ಸಾಧು ಕೋಕಿಲ, ಚಿಕ್ಕಣ್ಣ, ಸುಚೇಂದ್ರ ಪ್ರಸಾದ್ ಮೊದಲಾದವರು ಬಣ್ಣಹಚ್ಚಿದ್ದಾರೆ.

ಅಪ್ಪುಗೆ ಶಿವರಾಜ್ ಕುಮಾರ್ ಧ್ವನಿ ನೀಡಿದ್ದು ಮತ್ತಷ್ಟು ಕಿಕ್ ನೀಡಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಜೇಮ್ಸ್ ರಿಲೀಸ್ ಆಗಲಿದ್ದು, ಪುನೀತ್ ಜನ್ಮದಿನವಾದ ಮಾರ್ಚ್ 17ರಂದು ಜೇಮ್ಸ್ ತೆರೆಗೆ ಬರುವುದು ಬಹುತೇಕ ಖಚಿತವಾಗಿದೆ.