ಬೆಂಗಳೂರು : ಹಿಜಾಬ್ ವಿವಾದ ಹಿನ್ನೆಲೆ ಪದವಿ ಕಾಲೇಜು, ಡಿಪ್ಲೋಮಾ, ವಿಶ್ವವಿದ್ಯಾಲಯಗಳಿಗೆ ಫೆ.16ರವರೆಗೆ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.
ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಫೆ.16ರವರೆಗೆ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಎಲ್ಲ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜುಗಳು, ಡಿಪ್ಲೋಮಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಈ ಅವಧಿಯಲ್ಲಿ ಆನ್ ಲೈನ್ ಬೋಧನೆ ಎಂದಿನಂತೆಯೇ ನಡೆಯಲಿದೆ. ಜೊತೆಗೆ, ಈಗಾಗಲೇ ನಡೆಯುತ್ತಿರುವ ಮತ್ತು ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.










