ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವು…

40
firstsuddi

ಹಾವೇರಿ : ಖಾಸಗಿ ಬಸ್‍ವೊಂದು ಪಲ್ಟಿಯಾದ ಪರಿಣಾಮ ಬಸ್‍ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವಗಿರಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಬೆಂಳೂರಿನಿಂದ ಗೋಕಾಕ್‍ಗೆ ಈ ಸ್ಲೀಪರ್ ಬಸ್ ಹೊರಟಿತ್ತು. ಈ ವೇಳೆ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಬ್ರಿಡ್ಜ್ ಮೇಲಿಂದ ಪಲ್ಟಿಯಾಗಿ ಸರ್ವೀಸ್ ರಸ್ತೆಗೆ ಬಿದ್ದಿದೆ. ಪರಿಣಾಮ ಬಸ್ಸಿನ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಇನ್ನೂ ಅಪಘಾತದಲ್ಲಿ ಹದಿನೈದು ಜನರಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಕ್ರೇನ್ ಸಹಾಯದಿಂದ ಬಸ್ ಮೇಲೆತ್ತಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಶಂಕರ ಮಾರಿಹಾಳ, ಸಿಪಿಐ ನಾಗಮ್ಮ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.