ಹಿಜಾಬ್ ವಿಚಾರದಲ್ಲಿ ಬೇರೆ ರಾಷ್ಟ್ರಗಳು ಪ್ರತಿಕ್ರಿಯೆ ನೀಡುವುದು ಸ್ವಾಗತಾರ್ಹವಲ್ಲ : ವಿದೇಶಾಂಗ ಇಲಾಖೆ.

56
firstsuddi

ನವದೆಹಲಿ : ರಾಜ್ಯದಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ದೇಶ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ವಿದೇಶಾಂಗ ಇಲಾಖೆ ಪ್ರತಿಕ್ರಿಯೆ ನೀಡಿದ್ದು, ಹಿಜಾಬ್ ವಿಚಾರದಲ್ಲಿ ಬೇರೆ ರಾಷ್ಟ್ರಗಳು ಪ್ರತಿಕ್ರಿಯೆ ನೀಡುವುದು ಸ್ವಾಗತಾರ್ಹವಲ್ಲ ಎಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಗ್ಚಿ ಅವರು, ಕರ್ನಾಟಕ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿನ ಮಕ್ಕಳ ವಸ್ತ್ರ ಸಂಹಿತೆಗೆ ಸಂಬಂಧಿಸಿದ ವಿಚಾರ ಹೈಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದೆ.

ನಮ್ಮ ಸಾಂವಿಧಾನಿಕ ಚೌಕಟ್ಟು ಮತ್ತು ಕಾರ್ಯವಿಧಾನಗಳು, ಹಾಗೆಯೇ ನಮ್ಮ ಪ್ರಜಾಸತ್ತಾತ್ಮಕ ನೀತಿ ಮತ್ತು ರಾಜಕೀಯವು ಸಮಸ್ಯೆಗಳನ್ನು ಪರಿಗಣಿಸುವ ಮತ್ತು ಪರಿಹರಿಸುವ ಸಂದರ್ಭವಾಗಿದೆ. ಭಾರತವನ್ನು ಚೆನ್ನಾಗಿ ತಿಳಿದಿರುವವರು ಭಾರತದ ಬಗ್ಗೆ ಮೆಚ್ಚುಗೆಯನ್ನು ಹೊಂದಿರುತ್ತಾರೆ. ನಮ್ಮ ಆಂತರಿಕ ವಿಷಯಗಳ ಬಗ್ಗೆ ಬೇರೆ ದೇಶಗಳ ಪ್ರೇರಿತ ಹೇಳಿಕೆಗಳು ಸ್ವಾಗತಾರ್ಹವಲ್ಲ ಎಂದು ಸರ್ಕಾರದ ನಿಲುವನ್ನು ಅರಿಂದಮ್ ಬಾಗ್ಚಿ ಸ್ಪಷ್ಟಪಡಿಸಿದ್ದಾರೆ.