ಬೆಂಗಳೂರು : ಹಿಜಾಬ್ ವಿವಾದದ ನಡುವೆಯೂ ಇಂದಿನಿಂದ ರಾಜ್ಯಾದ್ಯಂತ ಪ್ರೌಢ ಶಾಲೆಗಳು ಆರಂಭವಾಗುತ್ತಿದೆ.
ಹಿಜಾಬ್-ಕೇಸರಿ ಶಾಲು ವಿವಾದವು ತಾರಕಕ್ಕೇರಿದ ಹಿನ್ನೆಲೆಯಲ್ಲಿ ಹೈಸ್ಕೂಲು-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ಹೈಕೋರ್ಟ್ ಆದೇಶದ ಬೆನ್ನಲ್ಲೇ ಇಂದಿನಿಂದ 9 ಮತ್ತು 10ನೇ ತರಗತಿ ಆರಂಭವಾಗಿವೆ. ಶಾಲೆಗಳಿಗೆ ಭದ್ರತೆ ಒದಗಿಸಲಾಗಿದ್ದು, ಸೂಕ್ಷ್ಮ ಜಿಲ್ಲೆಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಯಾವುದೇ ಸಂಘಟನೆಗಳಿಗೆ ಶಾಲೆಯ ಆವರಣಕ್ಕೆ ಪ್ರವೇಶ ಇಲ್ಲ. ಶಾಲೆಗಳ ಸುತ್ತಮುತ್ತ ಮಕ್ಕಳು, ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿ ಬಿಟ್ಟರೆ ಬೇರೆ ಯಾರಿಗೂ ಪ್ರವೇಶವಿಲ್ಲ. ಅನುಮಾನಾಸ್ಪದ ಸಂಘಟನೆಗಳ ಮೇಲೆ ನಿಗಾ ಇಡಲು ಸೂಚನೆ ನೀಡಲಾಗಿದೆ.
ಇನ್ನು ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಹೈಕೋರ್ಟ್ ನ ವಿಸ್ತೃತ ಪೀಠದಲ್ಲಿ ಇಂದು ವಿಚಾರಣೆ ನಡೆಯಲಿದೆ.