ಹಿಜಾಬ್-ಕೇಸರಿ ವಿವಾದ – ಉಡುಪಿ, ಶಿವಮೊಗ್ಗದ ಕಾಲೇಜು ಸುತ್ತಮತ್ತ ಸೆಕ್ಷನ್ 144 ಜಾರಿ…

58
firstsuddi

ಉಡುಪಿ/ಶಿವಮೊಗ್ಗ : ಉಡುಪಿಯಲ್ಲಿ ಆರಂಭವಾದ ಹಿಜಬ್ ವಿವಾದ ರಾಜ್ಯಾದ್ಯಂತ ಹಬ್ಬಿದೆ. ಈ ಮಧ್ಯೆ ಇಂದಿನಿಂದ ಪಿಯುಸಿ ಹಾಗೂ ಪದವಿ ಕಾಲೇಜುಗಳು ಆರಂಭವಾಗುತ್ತಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಶಾಲಾ-ಕಾಲೇಜುಗಳ ಆವರಣದಿಂದ 200 ಮೀಟರ್ ಒಳಗಡೆ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ ಎಂದು ಡಿಸಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.

ಇತ್ತ ಹಿಜಾಬ್ ವಿವಾದದ ಕಾರಣ ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಎಚ್ಚರಿಕೆ ನೀಡಿದ್ದಾರೆ.