ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನಿವಾಸಕ್ಕೆ ನುಗ್ಗಲು ಯತ್ನಿಸಿದ ಅಪರಿಚಿತ ವ್ಯಕ್ತಿ.

73
firstsuddi

ನವದೆಹಲಿ : ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಲು ಯತ್ನಿಸಿದ್ದು, ಸದ್ಯ ದೆಹಲಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ಆತ ಮಾನಸಿಕವಾಗಿ ಅಸ್ವಸ್ಥ ಎಂದು ತಿಳಿದು ಬಂದಿದೆ. ದೋವಲ್ ಅವರ ನಿವಾಸವು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆನಲ್ಲಿದೆ ಮತ್ತು ಎನ್ ಎಸ್ ಎ ‘ಝಡ್ ಪ್ಲಸ್’ ಭದ್ರತಾ ವರ್ಗದ ಅಡಿಯಲ್ಲಿ ಬರುವುದರಿಂದ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ.