ಉಡುಪಿ : ಜಿಲ್ಲೆಯ ಅಜ್ಜರಕಾಡಿನ ಮಹಿಳಾ ಪ್ರಥಮ ದರ್ಜೆ ಕಾಲೇಜು ಆರಂಭವಾದ ಬೆನ್ನಲ್ಲೇ ಕಾಲೇಜಿನಲ್ಲಿ ಹಿಜಾಬ್ ಗದ್ದಲ ಏರ್ಪಟ್ಟಿದೆ.
ಸುಮಾರು 30 ಕ್ಕೂ ಅಧಿಕ ವಿದ್ಯಾರ್ಥಿಗಳು ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬಂದಿದ್ದು, ಕಾಲೇಜಿನಲ್ಲಿ ಸಮವಸ್ತ್ರ ಸಂಹಿತೆ ಇದ್ದು ನ್ಯಾಯಾಲಯದ ಮಧ್ಯಂತರ ಆದೇಶವನ್ನು ಪಾಲಿಸುವಂತೆ ಕಾಲೇಜು ಪ್ರಾಂಶುಪಾಲರು ವಿದ್ಯಾರ್ಥಿನಿಯರಿಗೆ ಮನವರಿಕೆ ಮಾಡಿದರು.
ವಿದ್ಯಾರ್ಥಿನಿಯರೊಂದಿಗೆ ಸಭೆ ನಡೆಸಿದ ಪ್ರಾಂಶುಪಾಲರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ನಾವು ನ್ಯಾಯಾಲಯದ ಮಧ್ಯಂತರ ಆದೇಶವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದ್ದೇವೆ. ಅದರಂತೆ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ತರಗತಿಗೆ ಹಾಜರಾಗಿದ್ದಾರೆ, ಬೆರಳೆಣಿಕೆಯ ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲು ನಿರಾಕರಿಸಿದ್ದಾರೆ. ಕೆಲವು ವಿದ್ಯಾರ್ಥಿನಿಯರು ಪ್ರತ್ಯೇಕ ಕೊಠಡಿಯಲ್ಲಿ ಕೂರುವುದಾಗಿ ಹೇಳಿದ್ದು ಅವರಿಗೆ ಆನ್ ಲೈನ್ ಕ್ಲಾಸ್ ಮಾಡಲು ಚಿಂತನೆ ನಡೆಸಲಾಗಿದೆ. ವಿದ್ಯಾರ್ಥಿಗಳ ಪರೀಕ್ಷೆಗೆ ತೊಡಕು ಉಂಟಾಗದಂತೆ ಕಾಲೇಜು ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.










