ಸಿಡಿ ಬಹಿರಂಗ ಪ್ರಕರಣ – ರಮೇಶ್ ಜಾರಕಿಹೊಳಿಗೆ ತಪ್ಪದ ಸಂಕಷ್ಟ…

73
firstsuddi

ನವದೆಹಲಿ : ಅತ್ಯಾಚಾರ ಆರೋಪ ಹೊತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಕಷ್ಟ ತಪ್ಪಿದ್ದಲ್ಲ ಎನ್ನುವಂತಾಗಿದೆ. ಸಿ.ಡಿ. ಬಹಿರಂಗ ಪ್ರಕರಣ ಸಂಬಂಧ ಎಸ್ ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.

ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ ಪ್ರಕರಣದ ಸಂತ್ರಸ್ತೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಇಂದಿರಾ ಬ್ಯಾನರ್ಜಿ ನೇತೃತ್ವದ ದ್ವಿ ಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸಂತ್ರಸ್ತೆ ಪರ ವಾದ ಮಂಡಿಸಿದ ವಕೀಲರು, ಎಸ್ ಐಟಿ ರಚನೆ ಸರಿ ಇಲ್ಲ, ತನಿಖಾ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ತನಿಖೆ ನಡೆದಿದೆ. ಎಸ್ ಐಟಿ ಯು ಬಿ-ರಿಪೋರ್ಟ್ ಸಲ್ಲಿಸಿದ್ದು ಈ ವರದಿಯ ಮೇಲೆ ನಮಗೆ ನಂಬಿಕೆ ಇಲ್ಲ. ಹೀಗೆ ಸಿದ್ದವಾಗಿರುವ ವರದಿಯನ್ನು ಸೆಷನ್ಸ್ ನ್ಯಾಯಲಯಕ್ಕೆ ಸಲ್ಲಿಸಲು ಹೈಕೋರ್ಟ್ ಅನುಮತಿ ನೀಡಿದೆ, ಸುಪ್ರೀಂಕೋರ್ಟ್ ಈ ಆದೇಶಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದರು.

ವಾದ ಆಲಿಸಿದ ಪೀಠ, ಎಸ್ ಐಟಿ ರಚನೆ ಸರಿಯಿದೆಯೇ ಎಂದು ಖಾತರಿ ಪಡಿಸಿಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಸಿ.ಡಿ. ಪ್ರಕರಣದ ವಿಚಾರಣೆ ಮಾರ್ಚ್ 9ರಂದು ಕರ್ನಾಟಕ ಹೈಕೋರ್ಟ್ ನಲ್ಲಿ ನಡೆಯಲಿದೆ.