ಬಿಹಾರದಲ್ಲಿ ಅಗ್ನಿ ದುರಂತ – ನಿಂತಿದ್ದ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ…

80
firstsuddi

ಪಾಟ್ನಾ : ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಳಗ್ಗೆ 9.50ರ ಸುಮಾರಿಗೆ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಸ್ಥಳಕ್ಕೆ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ ಭೇಟಿ ಕೊಟ್ಟು ರಕ್ಷಣಾ ಕಾರ್ಯಾಚರಣೆ ಕೈಗೊಂಡು ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್ ರೈಲಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ, ರೈಲಿನ ಅನೇಕ ಬೋಗಿಗಳು ಸುಟ್ಟು ಕರಕಲಾಗಿವೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.