ಇಂದಿನಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ…

57
firstsuddi

ಬೆಂಗಳೂರು : ಹಿಜಾಬ್ ವಿವಾದದ ನಡುವೆಯೇ ಇಂದಿನಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ನಡೆಯುತ್ತಿವೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ವೇಳಾಪಟ್ಟಿಯಂತೆಯೇ ಪರೀಕ್ಷೆ ನಡೆಯಲಿದೆ. ಹಿಜಾಬ್ ವಿವಾದದಿಂದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟ ಮಾಹಿತಿ ನೀಡಿದೆ.

ಹಿಜಾಬ್ ಸಂಘರ್ಷದಿಂದ ಪದವಿ ಕಾಲೇಜು ರಜೆ ಹಿನ್ನಲೆ ಮೂರು ದಿನ ತಡವಾಗಿ ಪರೀಕ್ಷೆ ಆರಂಭ ಆಗುತ್ತಿದೆ. ಪ್ರಾಯೋಗಿಕ ಪರೀಕ್ಷೆ ಮುಗಿಸಲು ಮಾರ್ಚ್ 25ರ ವರೆಗೂ ಪದವಿ ಪೂರ್ವ ಮಂಡಳಿ ಅವಕಾಶ ನೀಡಿದೆ. ಹಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸದೇ ತರಗತಿ ಪ್ರವೇಶಕ್ಕೆ ನಿರಾಕರಿಸಿದ್ದಾರೆ. ಹೀಗಾಗಿ ಪರೀಕ್ಷೆಗೆ ಹಾಜರಾಗದಿದ್ದರೆ ವಿದ್ಯಾರ್ಥಿನಿಯರಿಗೆ ಸಂಕಷ್ಟ ಎದುರಾಗಲಿದೆ.