ಕೊಡಗು : ದಂಪತಿ ಆತ್ಮಹತ್ಯೆಗೆ ಶರಣು…

66
firstsuddi

ಕೊಡಗು : ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಗ್ರಾಮದಲ್ಲಿ ನಡೆದಿದೆ.

ಪತಿ ಯುವರಾಜ್ (25), ಪತ್ನಿ ಶಿಲ್ಪಾ (22) ಮೃತ ದಂಪತಿ. ಬಿರುನಾಣಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಮೃತ ಯುವರಾಜ್ ಅರಣ್ಯ ಇಲಾಖೆಯಲ್ಲಿ ಫಾರೆಸ್ಟ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.

 ಪತ್ನಿ ಶಿಲ್ಪಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ಮನೆಗೆ ಬಂದ ಪತಿ ಯುವರಾಜ್, ಪತ್ನಿಯ ಶವ ನೋಡಿ ಪತ್ನಿ ನೇಣು ಬಿಗಿದು ಕೊಂಡಿದ್ದ ವೇಲ್‌ನಿಂದ ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.