ಆಂಧ್ರಪ್ರದೇಶ ಸಚಿವ ಮೇಕಪತಿ ಗೌತಮ್ ರೆಡ್ಡಿ ಹೃದಯಾಘಾತದಿಂದ ನಿಧನ…

84
firstsuddi

ಹೈದರಾಬಾದ್ : ಆಂಧ್ರಪ್ರದೇಶದ ಮಾಹಿತಿ ತಂತ್ರಜ್ಞಾನ ಮತ್ತು ಕೈಗಾರಿಕಾ ಸಚಿವ ಮೇಕಪತಿ ಗೌತಮ್ ರೆಡ್ಡಿ(50) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಗೌತಮ್ ರೆಡ್ಡಿ ಅವರಿಗೆ ಇಂದು ಬೆಳಗ್ಗೆ ಹಠಾತ್ ಹೃದಯಾಘಾತ ಉಂಟಾಗಿದೆ. ಈ ವೇಳೆ ಜೂಬ್ಲಿ ಹಿಲ್ಸ್ ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಗೌತಮ್ ರೆಡ್ಡಿ ಒಂದು ವಾರದ ಹಿಂದಷ್ಟೇ ದುಬೈ ಎಕ್ಸ್ ಪೋದಲ್ಲಿ ಪಾಲ್ಗೊಂಡು ವಿವಿಧ ಕಂಪನಿಗಳ ಜೊತೆ ಆಂಧ್ರಪ್ರದೇಶದಲ್ಲಿ ಹೂಡಿಕೆ ಮಾಡುವ ಒಪ್ಪಂದ ಮಾಡಿಕೊಂಡಿದ್ದರು. ನಿನ್ನೆಯಷ್ಟೇ ದುಬೈಯಿಂದ ಹೈದರಾಬಾದ್ ಗೆ ಬಂದಿದ್ದರು.