ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,405 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,28,51,929ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 235 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,12,344ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,28,51,929 ಮಂದಿ ಸೋಂಕಿತರ ಪೈಕಿ ಈವರೆಗೆ 4,21,58,510 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










