ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ – 7 ಕಾರ್ಮಿಕರು ದುರ್ಮರಣ…

74
firstsuddi

ಶಿಮ್ಲಾ : ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ 7 ಮಂದಿ ಸಾವನ್ನಪ್ಪಿದ್ದು, 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಹರೋಲಿಯ ತಹ್ಲಿವಾಲ್ ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ದುರ್ಘಟನೆ ನಡೆದಿದೆ. ಕಾರ್ಖಾನೆಯಲ್ಲಿ ಭಾರಿ ಶಬ್ದದೊಂದಿಗೆ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದವರ ಪೈಕಿ 7 ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಉನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಧಾವಿಸಿ ಬೆಂಕಿ ನಂದಿಸಿದ್ದಾರೆ. ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟಕ್ಕೆ ನಿಖರ ಕಾರಣ  ತಿಳಿದು ಬಂದಿಲ್ಲ.