ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್‍ರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ.

54
firstsuddi

ಮುಂಬೈ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ, ಎನ್ ಸಿಪಿ ನಾಯಕ ನವಾಬ್ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.

ಸತತ 6 ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ, ಹೆಚ್ಚಿನ ವಿಚಾರಣೆಗಾಗಿ ಅವರನ್ನು ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವೂದ್ ಇಬ್ರಾಹಿಂ ಸಂಬಂಧಿಕರು ಹಾಗೂ ಅವರ ಆಪ್ತರ ಮನೆ ಮೇಲೆ ಇಡಿ ದಾಳಿ ನಡೆಸಿ ವಿಚಾರಣೆ ಮುಂದುವರೆಸಿದೆ.

ಅಕ್ರಮ ಆಸ್ತಿ ವ್ಯವಹಾರಗಳು ಮತ್ತು ಹವಾಲಾ ವಹಿವಾಟು, ಭೂಗತ ಜಗತ್ತಿನ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಫೆಬ್ರವರಿ 15 ರಂದು ನವಾಬ್ ಮಲಿಕ್ ವಿರುದ್ಧ ಮುಂಬೈನಲ್ಲಿ ಹೊಸ ಪ್ರಕರಣ ದಾಖಲಿಸಿದ ನಂತರ ಇಡಿ ಈ ಕ್ರಮ ಕೈಗೊಂಡಿದೆ.