ಆನೇಕಲ್ : ಸಾಲಬಾಧೆ ತಾಳಲಾರದೇ ತನ್ನ ಏಳು ವರ್ಷದ ಮಗಳನ್ನು ಕೊಂದು ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.
ಮೂಲತಃ ಕೋಲಾರ ಜಿಲ್ಲೆಯ ಬಂಗಾರಪೇಟೆಯವರಾದ ವಿಜಯಕುಮಾರ್(39) ವೆಲ್ಡರ್ ಕೆಲಸ ಮಾಡಿಕೊಂಡಿದ್ದರು. ಹೆಂಡತಿ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗಿದ್ದ ವೇಳೆ ವಿಜಯಕುಮಾರ್ ತನ್ನ ಏಳು ವರ್ಷದ ಮಗಳು ಸಮೀಕ್ಷಾಳನ್ನು ತಲೆದಿಂಬು, ಚಾರ್ಜರ್ ವೈರ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ ಬಳಿಕ ವಿಜಯ್ ಕುಮಾರ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.










