ದೇವನಹಳ್ಳಿ : ಮೊಣಕಾಲಿಗೆ ಧರಿಸುವ ಕ್ಯಾಪ್‍ನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದು, ಆತನಿಂದ 75.54 ಲಕ್ಷ ಮೌಲ್ಯದ 1 ಕೆಜಿ 485 ಗ್ರಾಂ ಚಿನ್ನವನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕ ಮೊಣಕಾಲಿಗೆ ನೀ ಕ್ಯಾಪ್ ಹಾಕ್ಕೊಂಡು ಅದರಲ್ಲಿ ಚಿನ್ನ ಅಡಗಿಸಿಟ್ಟುಕೊಂಡು ಬಂದಿದ್ದ. ಅದನ್ನು ಕಂಡ ಅಧಿಕಾರಿಗಳಿಗೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ಪೇಸ್ಟ್ ರೂಪದಲ್ಲಿ ಚಿನ್ನದ ಸ್ಮಗ್ಲಿಂಗ್ ಮಾಡುತ್ತಿರುವುದು ತಿಳಿದುಬಂದಿದೆ. ಸದ್ಯ ಆರೋಪಿಯನ್ನ ವಶಕ್ಕೆ ಪಡೆದಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.










