ಉಕ್ರೇನ್‍ನ ಬಹುಮಹಡಿ ಕಟ್ಟಡದ ಮೇಲೆ ರಷ್ಯಾ ಕ್ಷಿಪಣಿ ದಾಳಿ…

74
firstsuddi

ಕೀವ್ : ಉಕ್ರೇನ್ ಮೇಲೆ ದಾಳಿ ಮುಂದುವರೆಸಿರುವ ರಷ್ಯಾ ಉಕ್ರೇನ್ ನ ರಾಜಧಾನಿ ಕೀವ್ ನಗರದಲ್ಲಿರುವ ಬಹುಮಹಡಿ ಕಟ್ಟಡದ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.

ಒಂದು ಕ್ಷಿಪಣಿಯು ಕೈವಾದ ಜುಲಿಯಾನಿ ವಿಮಾನ ನಿಲ್ದಾಣದ ಸಮೀಪವಿರುವ ಪ್ರದೇಶದಲ್ಲಿ ಸ್ಫೋಟಗೊಂಡರೆ, ಇನ್ನೊಂದು ಕ್ಷಿಪಣಿ ಸೆವಾಸ್ಟೊಪೋಲ್ ಚೌಕದ ಸಮೀಪವಿರುವ ಪ್ರದೇಶದಲ್ಲಿ ಸ್ಫೋಟಗೊಂಡಿದೆ. ಕ್ಷಿಪಣಿ ದಾಳಿ ಪರಿಣಾಮ ಕಟ್ಟಡಕ್ಕೆ ದೊಡ್ಡ ಮಟ್ಟದ ಹಾನಿಯಾಗಿದೆ. ಆದರೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಉಕ್ರೇನ್ ನ ಸೇನಾನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂದು ಹೇಳುತ್ತಲೇ ರಷ್ಯಾ ಪ್ರಮುಖ ನಗರಗಳ ಮೇಲೂ ದಾಳಿ ನಡೆಸುತ್ತಿದೆ.