ಬೆಂಗಳೂರು: ಸ್ಯಾಂಡಲ್‍ವುಡ್ ನಟ ದಿ. ಪುನೀತ್ ರಾಜ್ಕುಮಾರ್ ಅವರ ಸಮಾಧಿಗೆ ತಮಿಳು ನಟ ದಳಪತಿ ವಿಜಯ್ ಭೇಟಿ ನಿಡಿದ್ದಾರೆ.
ಅಪ್ಪು ಕುಟುಂಬ ಸದಸ್ಯರಿಗೂ ಹೇಳದೆ ವಿಜಯ್, ಕಂಠೀರವ ಸ್ಟುಡಿಯೋಗೆ ತೆರಳಿ ಪುನೀತ್ ಸಮಾಧಿಗೆ ನಮನ ಸಲ್ಲಿಸಿದರು. ಸಾಮಾನ್ಯ ಅಭಿಮಾನಿಯಂತೆ ಸಾಲಿನಲ್ಲಿ ಬಂದು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಕೆಲವು ದಿನಗಳ ಹಿಂದೆ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರು ಭೇಟಿಕೊಟ್ಟಿದ್ದರು. ಈ ವೇಳೆ ಶಿವರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ನಿವಾಸಕ್ಕೆ ಭೇಟಿಕೊಟ್ಟು ಸಾಂತ್ವಾನ ಹೇಳಿದ್ದರು.










