ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 105 ರೂ. ಏರಿಕೆ…

86
firstsuddi

ನವದೆಹಲಿ : ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ ಇಂದು ದೆಹಲಿಯಲ್ಲಿ 105 ರೂಪಾಯಿ ಏರಿಕೆಯಾಗಿದ್ದು, ಈ ಮೂಲಕ ಇಂದಿನಿಂದ ರಾಷ್ಟ್ರ ರಾಜಧಾನಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,012 ರೂ. ಆಗಿದೆ. ಇದರೊಂದಿಗೆ 5 ಕೆಜಿ ತೂಕದ ಗ್ಯಾಸ್ ಸಿಲಿಂಡರ್ ಬೆಲೆ 27 ರೂಪಾಯಿ ಹೆಚ್ಚಾಗಿದ್ದು, ದೆಹಲಿಯಲ್ಲಿ 5ಕೆಜಿ ಸಿಲಿಂಡರ್ ಬೆಲೆ 569ರೂ.ಗೆ ಏರಿಕೆಯಾಗಿದೆ. ಆದರೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‍ ದರದಲ್ಲಿ ಯಾವುದೇ ಹೆಚ್ಚಳವಾಗಿಲ್ಲ.

ರಾಷ್ಟ್ರೀಯ ತೈಲು ಮಾರುಕಟ್ಟೆ ಕಂಪನಿಗಳು ಫೆಬ್ರವರಿಯಲ್ಲಿ 19 ಕೆಜಿ ತೂಕದ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು 91.50ರೂ.ಗಳಷ್ಟು ಕಡಿತಗೊಳಿಸಿತ್ತು.