ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಸ್ಯಾಂಡಲ್‍ವುಡ್ ನಟಿ ಅಮೂಲ್ಯ.

105
firstsuddi

ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಅವರು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಇಂದು ಬೆಂಗಳೂರಿನ ಜಯನಗರದ ಕ್ಲೈಡ್ ನೈಟ್ ಆಸ್ಪತ್ರೆಯಲ್ಲಿ ಬೆಳಗ್ಗೆ 11.45ಕ್ಕೆ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ.

ಈ ಕುರಿತು ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ ಅವರು, ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಈ ಪಯಣದಲ್ಲಿ ಜತೆ ನಿಂತ ಎಲ್ಲರಿಗೆ ಧನ್ಯವಾದ ಸಲ್ಲಿಸಿದ್ದಾರೆ.