ಉಡುಪಿ : ಸಿಗರೇಟ್ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಚಿತ್ರಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿರಾಯ ಇದೀಗ ಅರೆಸ್ಟ್ ಆಗಿದ್ದಾನೆ.
ಕುಂದಾಪುರದ ಬರೆಕಟ್ಟು ನಿವಾಸಿ ಪ್ರದೀಪ್ ಬಂಧಿತ ಆರೋಪಿ. ಪ್ರದೀಪ್ ಹಾಗೂ ಪ್ರಿಯಾಂಕ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಪತ್ನಿಗೆ ವರದಕ್ಷಿಣೆಗಾಗಿ ಪ್ರತೀ ದಿನ ಹಿಂಸೆ ನೀಡುತ್ತಿದ್ದನು. ಈ ಬಗ್ಗೆ ಪತ್ನಿ ಪ್ರಿಯಾಂಕ ವರದಕ್ಷಿಣೆಗಾಗಿ ಹಿಂಸೆ ನೀಡುತ್ತಿದ್ದಾನೆ ಎಂದು ಪ್ರಕರಣ ದಾಖಲಿಸಿದ್ದರು. ಪ್ರತೀ ದಿನ ಚಿನ್ನ ಹಾಗೂ ಹಣ ನೀಡುವಂತೆ ಒತ್ತಾಯಿಸುತ್ತಿದ್ದ ಪ್ರದೀಪ್, ಎರಡು ಲಕ್ಷ ರುಪಾಯಿ, ನಾಲ್ಕು ಪವನ್ ಚಿನ್ನಕ್ಕಾಗಿ ಬೇಡಿಕೆ ಇಟ್ಟಿದ್ದನು.
ಆರೋಪಿ ಪ್ರದೀಪ್ ತನ್ನ ಪತ್ನಿ ಪ್ರಿಯಾಂಕಾಗೆ ಸಿಗರೇಟಿನಿಂದ ಮುಖಕ್ಕೆ ಸುಟ್ಟು ಚಿತ್ರಹಿಂಸೆ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪ್ರಿಯಾಂಕ ದೂರಿನ ಮೇರೆಗೆ ಕುಂದಾಪುರ ಪೊಲೀಸರು ಆರೋಪಿ ಪ್ರದೀಪ್ ನನ್ನು ಬಂಧಿಸಿ ಇದೀಗ ವಿಚಾರಣೆ ನಡೆಸುತ್ತಿದ್ದಾರೆ.










