ಕೆಂಪು ಕೋಟೆ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ಧ : ಬಿಜೆಪಿ ಶಾಸಕ ಹರೀಶ್ ಪೂಂಜಾ.

75
firstsuddi

ಮಂಗಳೂರು : ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ ಎಂದು ತುಳು ಭಾಷೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಮಾಡಿದ ಭಾಷಣದ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಶಿವಮೊಗ್ಗದ ಹರ್ಷ ಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಷಡ್ಯಂತ್ರ, ಪ್ರೇರಣೆ ಮತ್ತು ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.

ಕೆಂಪು ಕೋಟೆ ಮೇಲೆ ಭಗವಾಧ್ವಜ ಹಾರಿಸ್ತೀವಿ ಅಂತ ಈಶ್ವರಪ್ಪ ಹೇಳಿದ್ರು ಅನ್ನೋ ಕಾರಣಕ್ಕೆ ಅಧಿವೇಶನ ಮೊಟಕುಗೊಳಿಸಿದ್ರು. ಈ ಹಿಂದೂ ಸಮಾಜ ಕೆಂಪು ಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ಧ. ಆದರೆ ಕೆಂಪುಕೋಟೆಯ ಮೇಲೆ ಭಗವಧ್ವಜ ಹಾರಿಸೋದು ರಾಷ್ಟ್ರಧ್ವಜದ ಕೆಳಗೆ. ಭಗವಧ್ವಜ ಹಾರಿಸೋದನ್ನ ಯಾವ ಪಕ್ಷದಿಂದಲೂ ತಪ್ಪಿಸೋದಕ್ಕೆ ಸಾಧ್ಯವೇ ಇಲ್ಲ. ಇದು ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಮಾಜದ ಸಂಕಲ್ಪ. ದೇಶಕ್ಕೆ ಸ್ವಾತಂತ್ರ್ಯ ಸಿಗಲು ಬಾಲಗಂಗಾಧರ ತಿಲಕರು ಭಗವಧ್ವಜ ಎದುರಿಟ್ಟು ಹೋರಾಟ ಮಾಡಿದರು. ಅದಕ್ಕೂ ಮೊದಲು ಹಿಂದೂ ಸಮಾಜದ ಶಕ್ತಿಯಾಗಿದ್ದ ಶಿವಾಜಿ ಮಹಾರಾಜರ ಶಕ್ತಿಯೂ ಭಗವಧ್ವಜ ಆಗಿದೆ ಎಂದು ಹೇಳಿದರು.