ರಾಯಚೂರು : ವ್ಯಕ್ತಿಯೊಬ್ಬ ಕಾಲು ನೋವಿನಿಂದ ಬೇಸತ್ತು ಮರ್ಮಾಂಗವನ್ನೇ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಇರಕಲ್ ಗ್ರಾಮದಲ್ಲಿ ನಡೆದಿದೆ.
ಗ್ಯಾನಪ್ಪ (60) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಗ್ವಾನಪ್ಪ ಅವರು ಹಲವು ದಿನಗಳಿಂದ ಗ್ಯಾಂಗ್ರಿನ್ ಸಮಸ್ಯೆ, ಕಾಲು ನೋವಿನಿಂದ ಬಳಲುತ್ತಿದ್ದರು. ಆದರೆ ಈ ಆರೋಗ್ಯ ಸಮಸ್ಯೆಗೆ ಹೆಚ್ಚಿನ ಹಣವನ್ನ ವ್ಯಯ ಮಾಡಲು ಸಾಧ್ಯವಾಗದ ಕಾರಣ ಮರ್ಮಾಂಗ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










