ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,396 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,51,556ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 201 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,14,589ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,29,51,556 ಮಂದಿ ಸೋಂಕಿತರ ಪೈಕಿ ಈವರೆಗೆ 4,23,67,070 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










