ಕರ್ನಾಟಕ ಬಜೆಟ್ 2022 : ಕೃಷಿ ಕ್ಷೇತ್ರಕ್ಕೆ ಬಂಪರ್ ಕೊಡುಗೆ…

85
firstsuddi

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಮೊದಲನೇ ಹಾಗೂ 2022ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡಿಸಿದ್ದು, ಕೃಷಿ ಕ್ಷೇತ್ರಕ್ಕೆ 33,700 ಕೋಟಿ ರುಪಾಯಿ ಸಿಕ್ಕಿದೆ.

ಈ ಬಾರಿಯ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಏನೆಲ್ಲಾ ಕೊಡುಗೆಗನ್ನು ನೀಡಲಾಗಿದೆ ಎಂಬುದು ಈ ಕೆಳಕಂಡಂತಿದೆ.

• ಪ್ರತಿ ಎಕರೆಗೆ 250 ರೂ.ನಂತೆ ರೈತರಿಗೆ ಡೀಸೆಲ್ ಸಹಾಯಧನ ನೀಡುವ ರೈತ ಶಕ್ತಿ ಯೋಜನೆಗೆ 500 ಕೋಟಿ ರೂ. ಅನುದಾನ

• ಗ್ರಾಮೀಣ ರೈತರಿಗೆ ಆರೋಗ್ಯ ಸೇವೆ ಒದಗಿಸಲು ಪರಿಷ್ಕೃತ ರೂಪದಲ್ಲಿ ಯಶಸ್ವಿನಿ ಯೋಜನೆ ಮರುಜಾರಿ, ರಾಜ್ಯ ಸರ್ಕಾರದಿಂದ 300 ಕೋಟಿ ರೂ. ಅನುದಾನ. ರೇಷ್ಮೆ ಬೆಳೆಗಾರರಿಗೆ ಪ್ರೋತ್ಸಾಹ

• 57 ತಾಲೂಕುಗಳ ವ್ಯಾಪ್ತಿಯಲ್ಲಿ 2.75 ಲಕ್ಷ ಹೆಕ್ಟೇರ್ ಮಳೆಯಾಶ್ರಿತ ಪ್ರದೇಶದಲ್ಲಿ ಕೇಂದ್ರದ ನೆರವಿನೊಂದಿಗೆ 642 ಕೋಟಿ ರೂ. ವೆಚ್ಚದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಜಲಾನಯನ ಅಭಿವೃದ್ಧಿ ಘಟಕ 2.0 ಜಾರಿ

• ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಲು ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಶೇ.90 ಹಾಗೂ ಇತರೆ ವರ್ಗದ ರೈತರಿಗೆ ಶೇ.75 ಸಹಾಯಧನ

• ರಾಷ್ಟ್ರೀಯ ಖಾದ್ಯ ತೈಲಗಳು ತಾಳೆ ಎಣ್ಣೆ ಅಭಿಯಾನನದಡಿ ಐದು ವರ್ಷಗಳಲ್ಲಿ 25,000 ಹೆಕ್ಟೇರ್ ಹೆಚ್ಚಿಸುವ ಗುರಿ ಸಾಧಿಸಲು 35 ಕೋಟಿ ರೂ. ಅನುದಾನ

• ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳನ್ನು ಅಳವಡಿಸಲು 25 ಕೋಟಿ ರೂ. ಅನುದಾನ

• ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಪ್ರತಿ ಟನ್ ದ್ವಿತಳಿ ರೇಷ್ಮೆ ಗೂಡಿಗೆ 10 ಸಾವಿರ ರೂ. ಪ್ರೋತ್ಸಾಹ ಧನ. ದ್ವಿತಳಿ ಬಿತ್ತನೆ ಗೂಡಿಗೆ ಪ್ರತಿ ಕೆಜಿಗೆ 50 ರೂ. ಪ್ರೋತ್ಸಾಹ ಧನ ಹೆಚ್ಚಳ

• ಕಲಬುರಗಿ ಮತ್ತು ಹಾವೇರಿಯಲ್ಲಿ ನಬಾರ್ಡ್ ನೆರವಿನಿಂದ 30 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ

• ರೇಷ್ಮೆ ನೂಲು ಬಿಚ್ಚಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೂ ಪ್ರೋತ್ಸಾಹ ಧನ

• ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ಹೊಸ ಕೃಷಿ ವಿವಿ ಸ್ಥಾಪನೆ. ಬಳ್ಳಾರಿಯ ಹಗರಿಬೊಮ್ಮನಹಳ್ಳಿಯಲ್ಲಿ ಕೃಷಿ ಕಾಲೇಜು ಸ್ಥಾಪನೆ.

• ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್ ಸ್ಥಾಪನೆ