ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,921 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,57,477ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 289 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,14,878ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,29,57,477 ಮಂದಿ ಸೋಂಕಿತರ ಪೈಕಿ ಈವರೆಗೆ 4,23,78,721 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










