ಸರ್ಕಾರದಿಂದ ನವೀನ್ ಕುಟುಂಬಕ್ಕೆ ಪರಿಹಾರ ಕೊಡಲು ನಿರ್ಧಾರ : ಬೊಮ್ಮಾಯಿ.

55
firstsuddi

ಬೆಂಗಳೂರು : ಸರ್ಕಾರದಿಂದ ನವೀನ್ ಕುಟುಂಬಕ್ಕೆ ಪರಿಹಾರ ಕೊಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಆರ್.ಟಿ.ನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ನಡೆಯುತ್ತಿದೆ. ಈ ಕುರಿತು ನಿಖರ ಮಾಹಿತಿ ಪಡೆಯಲಾಗುತ್ತಿದೆ. ಉಕ್ರೇನ್ ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ. ಖಾರ್ಕೀವ್, ಕೀವ್ನಲ್ಲಿ ಹೊರಬರಲಾರದ ಪರಿಸ್ಥಿತಿ ಇದೆ. ಸಿಲುಕಿಕೊಂಡವರನ್ನು ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರು ಕಾರ್ಯನಿರತರಾಗಿದ್ದಾರೆ. ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದು ಹೇಳಿದ್ದಾರೆ.

ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು, ಉಕ್ರೇನ್ ರಾಯಭಾರ ಕಚೇರಿಯೊಂದಿಗೂ ಮಾತನಾಡಲಾಗಿದೆ. ಕೇಂದ್ರ ಜಲಶಕ್ತಿ ಸಚಿವರು ಭಾಗವಹಿಸುವ ಜಲಜೀವನ್ ಮಿಷನ್ ಕುರಿತು ದಕ್ಷಿಣ ರಾಜ್ಯಗಳ ಪ್ರಾದೇಶಿಕ ಸಭೆಯಲ್ಲಿ ಭಾಗವಹಿಸಿ ನಂತರ ಶಿಕಾರಿಪುರದಲ್ಲಿ ರೈತರ ಸಭೆಯಲ್ಲಿ ಪಾಲ್ಗೊಂಡು, ರಾಣಿಬೆನ್ನೂರಿನಲ್ಲಿ ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಅವರ ತಂದೆಯವರನ್ನು ಭೇಟಿಯಾಗಲಿದ್ದೇನೆ ಎಂದರು.