ನಾಲ್ವರು ಯೋಧರ ಮೇಲೆ ಗುಂಡು ಹಾರಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ಯೋಧ.

61
firstsuddi

ಚಿಕ್ಕೋಡಿ : ಬಿಎಸ್ ಎಫ್ ಯೋಧರೊಬ್ಬರು ನಾಲ್ವರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಪಂಜಾಬ್ ನಲ್ಲಿ ನಡೆದಿದೆ.

ಸತ್ಯಪ್ಪ ಸಿದ್ದಪ್ಪ ಕಿಲಾರಗಿ (33) ನಾಲ್ಕು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಆನಂತರ ತಾನೂ ಗುಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆ ವಂಟಮೂರಿ ಗ್ರಾಮದ ಯೋಧ ಸತ್ಯಪ್ಪ ಕಳೆದ 13 ವರ್ಷಗಳ ಹಿಂದೆ ಬಿಎಸ್ ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ನಿನ್ನೆ ಪಂಜಾಬ್ ನ ಅಮೃತಸರ ಅಟ್ಟಾರಿ ಗಡಿಯ ಖೇಸರ್ ಕ್ಯಾಂಪ್ ನಲ್ಲಿ ನಾಲ್ಕು ಯೋಧರ ಮೇಲೆ ಗುಂಡಿನ ದಾಳಿ ಮಾಡಿ ತಾನೂ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ. ಸತ್ಯಪ್ಪ ವೈಯಕ್ತಿಕವಾಗಿ ತುಂಬಾ ಸಾಲ ಮಾಡಿಕೊಂಡಿದ್ದರು. ಅಲ್ಲದೆ ಕೌಟುಂಬಿಕ ವಿಚಾರದಲ್ಲಿಯೂ ನೆಮ್ಮದಿ ಇಲ್ಲದೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.