ಮುಂಬೈ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಸಚಿವ, ಎನ್ಸಿಪಿ ನಾಯಕ ನವಾಬ್ ಮಲಿಕ್ ಅವರನ್ನು ವಿಶೇಷ ನ್ಯಾಯಾಲಯ ಮಾರ್ಚ್ 21ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಜಾರಿ ನಿರ್ದೇಶನಾಲಯ(ಇಡಿ) ಫೆಬ್ರವರಿ 23 ರಂದು ನವಾಬ್ ಮಲಿಕ್ ಅವರನ್ನು ಬಂಧಿಸಿತ್ತು. ಅಲ್ಲದೆ ಹೆಚ್ಚಿನ ವಿಚಾರಣೆಗಾಗಿ ಮಲಿಕ್ ಅವರನ್ನು ಮಾರ್ಚ್ 7ರ ವರೆಗೆ ತನ್ನ ವಶಕ್ಕೆ ಪಡೆದಿತ್ತು. ಇಡಿ ವಶದಲ್ಲಿದ್ದ ಎನ್ ಸಿಪಿ ನಾಯಕನನ್ನು ಇಂದು ವಿಶೇಷ ಪಿಎಂಎಲ್ಎ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅಕ್ರಮ ಹಣ ಸಂದಾಯ ವಿಷಯವಾಗಿ ಭೂಗತ ಲೋಕದೊಂದಿಗೆ ಮಲಿಕ್ ಸಂಪರ್ಕ ಹೊಂದಿರುವ ಶಂಕೆ ಇದೆ. ಅಲ್ಲದೇ, ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಬೇನಾಮಿ ಆಸ್ತಿಯನ್ನು ತೊಡಗಿಸಿರುವ ಮಾಹಿತಿ ಲಭ್ಯವಾಗಿದೆ ಎಂದು ಇಡಿ ಮೂಲಗಳು ಹೇಳಿವೆ.










