ಮಹಿಳೆಯರು ಸಕಾರಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಬೇಕು : ಎನ್.ಎಸ್.ಶೃತಿ.

121
firstsuddi

ಚಿಕ್ಕಮಗಳೂರು : ಮಹಿಳೆಯರು ಅಡುಗೆ ಮನೆಗಷ್ಟೇ ಸೀಮಿತರಾಗದೆ ಅದರಿಂದ ಹೊರಬಂದು ಶಿಕ್ಷಣವಂತರು ಮತ್ತು ಸ್ವಾವಲಂಬಿಗಳಾಗಬೇಕು ಎಂದು ಹೆಚ್ಚುವರಿ ಜಿಲ್ಲಾ ಪೋಲೀಸ್ ಮುಖ್ಯಾಧಿಕಾರಿ ಎನ್.ಎಸ್.ಶೃತಿ ಸಲಹೆ ನೀಡಿದರು.

ಬಹುಜನ ಸಮಾಜ ಪಕ್ಷದ ಜಿಲ್ಲಾ ಸಹೋದರತ್ವ ಸಮಿತಿ ನಗರದ ಅಂಬೇಡ್ಕರ್ ಭವನದಲ್ಲಿ ಇಂದು ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಸಕಾರಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಬೇಕು, ಹಿಂಜರಿಕೆ ಬಿಡಬೇಕು, ನಮ್ಮಿಂದ ಎಲ್ಲವೂ ಸಾಧ್ಯ ಎಂಬುದನ್ನು ಮನಗಾಣಬೇಕು, ಬದುಕನ್ನು ಸವಾಲಾಗಿ ಸ್ವೀಕರಿಸಬೇಕು, ಸರ್ಕಾರಗಳು ತಮಗಾಗಿ ರೂಪಿಸಿರುವ ಯೋಜನೆಗಳು ಕಾರ್ಯಕ್ರಮಗಳು ಮತ್ತು ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಬೆಳೆಯಬೇಕು ಎಂದು ಕಿವಿಮಾತು ಹೇಳಿದರು.

ಬಿಎಸ್‍ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಕೃಷ್ಣ ಮಾತನಾಡಿ ಮಹಿಳೆಯರ ಸರ್ವಾಂಗೀಣ ಅಭಿವೃದ್ದಿಯ ದೃಷ್ಠಿಯಿಂದ ಸರ್ಕಾರ ಅವರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಬೇಕು, ಅವರು ಸ್ವಾವಲಂಬಿಗಳಾಗಿ ಬದುಕುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಸಹೋದರತ್ವ ಸಮಿತಿಯ ಅಧ್ಯಕ್ಷೆ ಕೆ.ಬಿ.ಸುಧಾ ಮಹಿಳೆಯರು ಸಂವಿಧಾನ ನೀಡಿರುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸ್ವಾವಲಂಬಿಗಳಾಗಬೇಕು ಎಂದು ಕಿವಿಮಾತು ಹೇಳಿದರು.

ವಿಶ್ವಶಾಂತಿ ಪಾಲನಾ ಪಡೆಗೆ ನಿಯೋಜನೆಗೊಂಡಿರುವ ಎ.ಎಸ್.ಪಿ ಎ.ಎನ್.ಶೃತಿ, ಆಣೂರು ಗ್ರಾಮ ಪಂಚಾಯಿತಿ ಸದಸ್ಯೆ ಗಿರಿಜಾ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಮಹಿಳೆಯರಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು, ಬಿಎಸ್‍ಪಿ ರಾಜ್ಯ ಕಾರ್ಯದರ್ಶಿ ಪರಮೇಶ್, ಪಕ್ಷದ ಮುಖಂಡರಾದ ಹುಣಸೇಮಕ್ಕಿ ಲಕ್ಷ್ಮಣ್, ಕಬ್ಬಿಗೆರೆ ಮೋಹನ್, ಮರ್ಲೆ ಅಣ್ಣಯ್ಯ, ಪಾರ್ವತಿ, ರೇಖಾ, ಕೆ.ಎಸ್.ಮಂಜುಳಾ, ಲತಾ, ಕೆ.ಆರ್.ಗಂಗಾಧರ್, ಹರೀಶ್ ಮಿತ್ರ, ಹಿರೇಮಗಳೂರು ರಾಮಚಂದ್ರ ಉಪಸ್ಥಿತರಿದ್ದರು.