ನವದೆಹಲಿ : ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭ ಹಾರೈಸಿದ್ದಾರೆ ಹಾಗೆ ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.
“ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶವನ್ನು ಗೆದ್ದವರಿಗೆ ಶುಭಾಶಯಗಳು. ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರಿಗೆ ಅವರ ಶ್ರಮ ಮತ್ತು ಸಮರ್ಪಣೆಗಾಗಿ ನನ್ನ ಕೃತಜ್ಞತೆಗಳು. ನಾವು ಇದರಿಂದ ಪಾಠ ಕಲಿಯುತ್ತೇವೆ ಮತ್ತು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ’’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.










