ಅಹಮದಾಬಾದ್ : ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಗುಜರಾತ್ ವಿಧಾನಸಭೆ ಚುನಾವಣೆಯ ಮೇಲೆ ಕೇಂದ್ರೀಕೃತವಾಗಿದ್ದು, ಇಂದು ಅಹಮದಾಬಾದ್ ನಲ್ಲಿ ರೋಡ್ ಶೋ ನಡೆಸಿದರು.
ಅಹಮದಾಬಾದ್ ವಿಮಾನ ನಿಲ್ದಾಣದಿಂದ ಕೋಬಾದ ಕಮಲಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿವರೆಗೆ ಪ್ರಧಾನಿ ಮೋದಿ ರೋಡ್ ಶೋ ನಡೆಸಿದರು. ಈ ವೇಳೆ ‘ಜೈ ಶ್ರೀ ರಾಮ್, ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಹಾಕಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್ ರೋಡ್ ಶೋ ವೇಳೆ ಮೋದಿ ಅವರಿಗೆ ಸಾಥ್ ನೀಡಿದರು.
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ ಮೋದಿ ಅವರ ತವರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ.










